

ಇಂದೋರ್: ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ವಯಸ್ಕನೋರ್ವ ಮನೆ ಮುಂದೆ ರಂಗೋಲಿ ಬಿಡುತ್ತಿದ್ದ ಇಬ್ಬರು ಹುಡಗಿಯರ ಮೇಲೆ ಕಾರು ಚಲಾಯಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Video Viral) ಆಗಿದ್ದು, ಅಪ್ರಾಪ್ತ ಹಾಗೂ ಆತನ ಪೋಷಕರ ವಿರುದ್ಧ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಘಟನೆಯಲ್ಲಿ ಪ್ರಿಯಾಂಶಿ (21) ಹಾಗೂ ನವ್ಯಾ (21) ಗಂಭೀರವಾಗಿ ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋ (Viral Video) ನೋಡುವುದಾದರೆ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಡಿಕ್ಕಿ ಹೊಡೆದ ಅಪ್ರಾಪ್ತ ವಯಸ್ಕರ ಕೂಡಲೇ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ ಕಾರು ಅಲ್ಲೇ ಪಕ್ಕದಲ್ಲಿದ್ದ ಅಂಗಡಿಯನ್ನು ಧ್ವಂಸ ಮಾಡಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಅಲೋಕ್ ಕುಮಾರ್ ಶರ್ಮಾ, ಅಪಘಾತ ಸಂಬಂಧ ಅಪ್ರಾಪ್ತ ವಯಸ್ಕರನನ್ನು ಬಂಧಿಸಲಾಗಿದ್ದು, ಬಿಎನ್ಎಸ್ಎಸ್ 110ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹುಡುಗಿಯರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಓರ್ವಳ ಸ್ಥಿತಿ ಚಿಂತಾಜನಕವಾಗಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಡಿಸಿಪಿ ಅಲೋಕ್ ಕುಮಾರ್ ಶರ್ಮಾ ತಿಳಿಸಿದ್ದಾರೆ.