

ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 14 ಕಲ್ಯಾಣ ಸಂಘಟಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಒ., ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ಶ್ರೇಣಿಯಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅಧಿಸೂಚನೆ ಪ್ರಕಟವಾಗಿ 40 ದಿನದೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು -560025 ಇಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.