

ಬೆಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೆರಿಟ್ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಶೈಕ್ಷಣಿಕ ಮತ್ತು ಮೀಸಲಾತಿಗೆ ಸಂಬಂಧಿಸಿದ ದೃಢೀಕೃತ ದಾಖಲೆಗಳನ್ನು ಆ.28ರೊಳಗೆ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯು ತಿಳಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ 310 ಹುದ್ದೆಗಳ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿದೆ. ಈ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಶೈಕ್ಷಣಿಕ ಮತ್ತು ಮೀಸಲಾತಿ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸೂಕ್ತ ಶಿಾರಸಿನೊಂದಿಗೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
2023ರ ಜೂ.2ರೊಳಗೆ ಪಡೆದುಕೊಂಡಿರುವ ದೃಢೀಕೃತ ದಾಖಲೆಗಳನ್ನು ಆ.28ರೊಳಗಾಗಿ ಕಾಲೇಜು ಶಿಕ್ಷಣ ಆಯುಕ್ತರ ಕಚೇರಿ, ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು-560 001 ಇಲ್ಲಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಇಲಾಖೆ ವೆಬ್‌ಸೈಟ್‌ನ ‘ಸೆಲೆಕ್ಷನ್ ಆ್ ಪ್ರಿನ್ಸಿಪಾಲ್’ ಪೇಜ್‌ನಲ್ಲಿರುವ ‘ಬೇಸಿಕ್ ಆೃಂಡ್ ಕ್ವಾಲಿಪಿಕೇಷನ್ ಡೀಟೈಲ್ಸ್ ಾರ್ ಸೆಲೆಕ್ಷನ್ ಾರ್ ದಿ ಪೋಸ್ಟ್ ಆ್ ಪ್ರಿನ್ಸಿಪಾಲ್’ ಲಿಂಕ್ ಮೂಲಕ ಶೈಕ್ಷಣಿಕ ಮತ್ತು ಮೀಸಲಾತಿ ವಿವರಗಳನ್ನು ಆನ್‌ಲೈನ್‌ನಲ್ಲಿ ನಮೂದಿಸಬೇಕು ಎಂದು ತಿಳಿಸಿದ್ದಾರೆ.