ಮಳೆ : ಇಂದು ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

rain
Published on

ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ 5 ದಿನ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು (ಜುಲೈ 24) ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳ ಕಾಲ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net