ರೆಡ್ ರಿಬ್ಬನ್ ಮ್ಯಾರಾಥಾನ್‌ನಲ್ಲಿ ವಿದ್ಯಾರ್ಥಿಗಳ ಸಾಧನೆ

ಮ್ಯಾರಥಾನ್
ಕೊಪ್ಪಳದಲ್ಲಿ ಯುವ ಜನೋತ್ಸವ ಅಂಗವಾಗಿ ಆಯೋಜಿಸಿದ್ದ ರೆಡ್ ರಿಬ್ಬನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ವಿಜೇತರಾದ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ನೀಲಮ್ಮ ಶಿವಶಂಕರರಾವ್ ದೇಸಾಯಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಪ್ರಶಸ್ತಿ ವಿತರಿಸಿದರು.
Published on

ಯಲಬುರ್ಗಾ: ಕೊಪ್ಪಳದಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಯುವ ಜನೋತ್ಸವ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ರೆಡ್ ರಿಬ್ಬನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ನೀಲಮ್ಮ ಶಿವಶಂಕರರಾವ್ ದೇಸಾಯಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಸಿಡಿಸಿ ಉಪಾಧ್ಯಕ್ಷ ಹಂಪಯ್ಯಸ್ವಾಮಿ ಹಿರೇಮಠ ಮಾತನಾಡಿ, ರೆಡ್ ರಿಬ್ಬನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿರುವುದು ಸಂತಸದ ವಿಷಯ.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಿ ಜೀವನದಲ್ಲಿ ಗುರಿ ಸಾಧಿಸಲು ಸಹಕಾರಿಯಾಗುತ್ತದೆ ಎಂದರು. ವಿಜೇತರಾದ ಶಿವಕುಮಾರ ರೊಡ್ಡರ್, ವೀರೇಶ ರ‌್ಯಾವಣಕಿಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಪ್ರಶಸ್ತಿ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net