

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ ಮೇ 16ರಿಂದ ಉಚಿತವಾಗಿ ರೆಫ್ರಿಜರೇಷನ್ ಮತ್ತು ಏರ ಕಂಡಿಷನಿಂಗ್ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯಥಿರ್ಗಳು 18 ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯಥಿರ್ಗಳು ತಮ್ಮ ಸ್ವ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಜಿರ್ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.