ಕಾವೇರಿ ವಿವಾದ; ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು: ಎಚ್​ಡಿಕೆ

Untitled design - 2023-09-29T094253.267
Published on

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತವಾದಂತೆ ಇಂದು ರಾಜ್ಯವ್ಯಾಪಿ ಬಂದ್​ ಮಾಡುವ ಮೂಲಕ ವಿವಿಧ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಕರೆ ಕೊಟ್ಟಿವೆ. ಅದರಂತೆಯೇ ಮಾಜಿ ಸಿಎಂ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ ಕೂಡ ಬಂದ್​ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

"ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್​ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲ-ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು" ಎಂದು ಹೇಳಿದರು.

"ಕಾಂಗ್ರೆಸ್​ ಸರಕಾರವೂ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು" ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net