ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿ

Traffic
Published on

ಬೆಂಗಳೂರು: ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿರುವ 12 ನೇ ಮುಖ್ಯರಸ್ತೆರಲ್ಲಿ ಒಂದು ಸಿಗ್ನಲ್ ಲೈಟ್ ಅಳವಡಿಸಬೇಕು ಇಲ್ಲವಾದರೆ ಒಬ್ಬ ಸಂಚಾರ ಪೊಲೀಸ್ ಕಾನ್‌ಸ್ಟೇಬಲ್ ಅನ್ನು ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೂ ನಿಯೋಜನೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಉತ್ತರಹಳ್ಳಿ 12 ನೇ ಮುಖ್ಯರಸ್ತೆಯ ಸಿಂಹಾದ್ರಿ ಲೇಔಟ್ ಮತ್ತು ಬಾಲಾಜಿನಗರದಲ್ಲಿ ತುಂಬಾ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಎರಡೂ ಬದಿಯಲ್ಲಿ ಕೆ.ಆರ್.ಆಸ್ಪತ್ರೆ ಬಿಎಂಟಿಸಿ ಬಸ್ ಸ್ಟಾಪ್ ಇದ್ದು ರಸ್ತೆ ದಾಟುವುದಕ್ಕೆ ವೃದ್ಧರು, ಮಕ್ಕಳು ಮತ್ತು ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡಬೇಕಾದ ಪರಿಸ್ಥಿತಿ ಇದೆ. ಜತೆಗೆ ಇಲ್ಲಿ ಖಾಸಗಿ ನ್ಯೂಸ್ ಚಾನಲ್‌ಗೆ ಸೇರಿದ್ದ ಹಲವು ವಾಹನಗಳನ್ನು ರಸ್ತೆಯಲ್ಲಿಯೇ ನಿಲ್ಲಿಸುತ್ತಿರುವುದರಿಂದ ಮತ್ತಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಕೂಡಲೇ ಇದಕ್ಕೆ ಪರಿಹಾರವಾಗಿ ಒಂದು ಸಿಗ್ನಲ್ ಲೈಟ್ ಅಳವಡಿಸಬೇಕು ಇಲ್ಲವಾದರೆ ಒಬ್ಬ ಸಂಚಾರ ಪೊಲೀಸ್ ಕಾನ್‌ಸ್ಟೇಬಲ್ ಅನ್ನು ಪ್ರತಿದಿನ ಬೆಳಗ್ಗೆ ೧೦ ರಿಂದ ರಾತ್ರಿ ೮ ಗಂಟೆಯವರೆಗೂ ನಿಯೋಜನೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಗೆ ಮತ್ತು ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಎನ್.ವಿ.ಅನಂತ ಪದ್ಮನಾಭ ಅವರು ವಿಜಯವಾಣಿಯೊಂದಿಗೆ ಅಳಲು ತೋಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net