ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ, ಸಮಾಜಕ್ಕಾಗಿ ಬದುಕಬೇಕು - ವೀರೇಶ್ವರ ಶಿವಾಚಾರ್ಯ ಸ್ವಾಮೀಜಿ

13MDG2 JAYANTI
Published on

ಮುಂಡರಗಿ: ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಗುರುಗಳ ಜಯಂತಿ ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾರ್ಥಕ್ಕಾಗಿ ಬದುಕದೇ ಸಮಾಜಕ್ಕಾಗಿ ಬದುಕಬೇಕು ಎಂದು ಹಿರೇವಡ್ಡಟ್ಟಿ ಶ್ರೀ ವೀರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಶ್ರೀ ಕಪ್ಪತ್ತಮಲ್ಲೇಶ್ವರ ದೇವಸ್ಥಾನದಲ್ಲಿ ಜಗದ್ಗುರು ರೇಣುಕಾಚಾರ್ಯ ಜಂಗಮ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಪಂಚಪೀಠಗಳಲ್ಲಿ ಮೊದಲನೇ ಪೀಠವಾಗಿರುವ ಬಾಳೆಹೊನ್ನೂರಿನ ಶ್ರೀರಂಭಾಪುರಿಪೀಠವು ವೀರಶೈವ ಧರ್ಮದ ಉದ್ಧಾರಕರು ಎಂದೇ ಜಗತ್ಪçಸಿದ್ಧಿಯಾದ ಶ್ರೀ ರೇಣುಕಾಚಾರ್ಯರು ಪ್ರತಿ ಯುಗದಲ್ಲೂ ಅವತಾರ ತಾಳಿ ಸಮಾಜವನ್ನು ಮುನ್ನಡೆಸುತ್ತಿದ್ದಾರೆ ಎಂದು ಅನೇಕ ಉಲ್ಲೇಖಗಳಿವೆ ಎಂದರು.
ಮಾಜಿ ಸಚಿವ ಎಸ್.ಎಸ್.ಪಾಟೀಲ ಮಾತನಾಡಿ, ಪ್ರತಿಯೊಬ್ಬರು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಗುರುಹಿರಿಯರ ಮಾರ್ಗದರ್ಶನ ಪಡೆಯಬೇಕು. ಶ್ರೀರೇಣುಕಾಚಾರ್ಯರು ಮಾನವ ಜನ್ಮಕ್ಕೆ ಜಯವಾಗಲಿ ಎಂದು ಹೇಳಿ ಸಮಾಜದ ಏಳಿಗೆಗೆ ಶ್ರಮಿಸಿದವರು ಎಂದರು.
ಬೆಳಗ್ಗೆ ಶ್ರೀ ಪಂಚಾಚಾರ್ಯರ ದ್ವಜಾರೋಣಹ ನೆರವೇರಿಸಲಾಯಿತು. ಕಾರ್ಯಕ್ರಮದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ಮಂಗಳ ವಾದ್ಯಗಳೊಂದಿಗೆ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಜರುಗಿತು. ಡಾ. ಪಂ.ಪುಟ್ಟರಾಜ ಕವಿಗವಾಯಿಗಳ ಶಿಷ್ಯಬಳಗದವರು ಸಂಗೀತ ಕಾರ್ಯಕ್ರಮ ನೆಡೆಸಿಕೊಟ್ಟರು.
ಕಲಕೇರಿ ಜಗದ್ಗುರು ರೇಣುಕಾಚಾರ್ಯ ಜಂಗಮ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಚನ್ನವೀರಸ್ವಾಮಿ ಸಾಲಿಮಠ, ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಎಸ್.ಬಿ.ಹಿರೇಮಠ, ವಿ.ಕೆ.ಬೂಸನೂಮಠ, ಅಂದಪ್ಪ ಮೇಟಿ, ಕೆ.ಎ.ದೇಸಾಯಿ, ವಿರೇಶ ಮುತ್ತಿನಪೇಡಿಮಠ, ಗವಿಸಿದ್ದಯ್ಯ ಹಿರೇಮಠ, ಹಾಲಯ್ಯ ಹಿರೇಮಠ ಉಪಸ್ಥಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net