ರೇಣುಕಾಂಬೆ ಪಲ್ಲಕ್ಕಿ ಉತ್ಸವ

18sor2
ಭೂಮಿ ಹುಣ್ಣಿಮೆ ನಿಮಿತ್ತ ಸೊರಬ ಚಂದ್ರಗುತ್ತಿಯಲ್ಲಿ ಶ್ರೀ ರೇಣುಕಾಂಬಾ ದೇವಿ ಪಲ್ಲಕ್ಕಿ ಉತ್ಸವ ನಡೆಯಿತು.
Published on

ಸೊರಬ: ಭೂಮಿ ಹುಣ್ಣಿಮೆ ನಿಮಿತ್ತ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಪಲ್ಲಕ್ಕಿ ಉತ್ಸವ ಜರುಗಿತು.

ದೇವಸ್ಥಾನದಿಂದ ವಾದ್ಯಮೇಳಗಳೊಂದಿಗೆ ಆರಂಭವಾದ ಪಲ್ಲಕ್ಕಿ ಉತ್ಸವ, ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯರಸ್ತೆ ಮೂಲಕ ರಥ ಬೀದಿ ಮಾರ್ಗವಾಗಿ ಸಾಗಿ ನಂತರ ದೇವಸ್ಥಾನ ತಲುಪಿತು. ಪಲ್ಲಕ್ಕಿ ಸಾಗುವ ಮಾರ್ಗದುದ್ದಕ್ಕೂ ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರು.

ಭೂಮಿ ಹುಣ್ಣಿಮೆ ನಿಮಿತ್ತ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವಿ ದರ್ಶನಾಶೀರ್ವಾದ ಪಡೆದರು. ವಿವಿಧ ತಾಲೂಕು, ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕ್ಷೇತ್ರದ ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ, ತ್ರಿಶೂಲ ಭೈರವ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾಕುಮಾರಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net