ರೇಣುಕಾಸ್ವಾಮಿ ಕೊಲೆ ಪ್ರಕರಣ; ಪೊಲೀಸರಿಗೆ ಶರಣಾದ ಮತ್ತೋರ್ವ ಆರೋಪಿ

Darshan Ravi
Published on

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ಚಿತ್ರದುರ್ಗ ಡಿವೈಎಸ್​ಪಿ ಕಚೇರಿಯಲ್ಲಿ ಆರೋಪಿ ಶರಣಾಗಿದ್ದು, ಈತನನ್ನು ರವಿ ಎಂದು ಗುರುತಿಸಲಾಗಿದೆ. ರಘು ಮತ್ತು ತಂಡದ ಜೊತೆ ಸೇರಿಕೊಂಡು ಈತ ರೇಣುಕಾಸ್ವಾಮಿಯನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ.

Accused Ravi

ಚಿತ್ರದುರ್ಗ ಜಿಲ್ಲೆಯ ಕುರುಬರಹಟ್ಟಿ ಗ್ರಾಮದ ನಿವಾಸಿಯಾದ ರವಿ ರಘು ಮತ್ತು ತಂಡದೊಂದಿಗೆ ಸೇರಿಕೊಂಡು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್​ ಮಾಡಿದ್ದ. ಬಳಿಕ ಆತನನ್ನು ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿರುವ ಶೆಡ್​ಗೆ ತಂದು ಬಿಟ್ಟಿದ್ದ ಎಂದು ವರದಿಯಾಗಿದೆ.

ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮಾರಿಸಿಕೊಂಡಿದ್ದ ಆರೋಪಿಯು ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರಿಗೆ ಶರಣಾಗಿದ್ದಾನೆ. ರೇಣುಕಾಸ್ವಾಮಿ ಹತ್ಯೆ ಸಂಬಂಧ ಪೊಲೀಸರು ಚಿತ್ರದುರ್ಗ ಮೂಲದ ಆರೋಪಿಗಳಾದ ರಘು ಮತ್ತು ಸಹಚರರನ್ನು ಸ್ಥಳ ಮಹಜರು ಮಾಡಲು ಕರೆದೊಯ್ಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net