ರೇಣುಕಸ್ವಾಮಿ ಕೊಲೆ ಪ್ರಕರಣ: 22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ

Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯು ಅ. 22ರಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಸಿಟಿ ಸಿವಿಲ್ ಕೋರ್ಟ್ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಪೀಠದ ಮುಂದೆ ಹಾಜರಾದ ದರ್ಶನ್ ಪರ ವಕೀಲ ಎಸ್.ಸುನಿಲ್ ಕುಮಾರ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಕೋರಿ ಮೆಮೊ ಸಲ್ಲಿಸಿದರು. ಆ ಮೊಮೊ ಆಧರಿಸಿ ಅ. 22ಕ್ಕೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗಿದೆ.

ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿಲ್ಲ. ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯವಿಲ್ಲ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net