

Renukaswamy Murder Case: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ. ಜಾಮೀನು ಕೋರಿ ಆಕೆ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಕೋರ್ಟ್ ವಜಾಗೊಳಿಸಿದೆ.
ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ, ಬೇಲ್ ಅರ್ಜಿಯನ್ನು ವಜಾಗೊಳಿಸುವ ಮೂಲಕ ಜೈಲುವಾಸವನ್ನು ಮುಂದುವರಿಸುವಂತೆ ಹೇಳಿದೆ.
ಇನ್ನು ಪ್ರಕರಣದ ಎ2 ಆರೋಪಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್ ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ. ದರ್ಶನ್ಗೆ ಮಲಗಲು ದಿಂಬು ಮತ್ತು ಹಾಸಿಗೆ ಕೂಡ ಇಲ್ಲ. ಇದರಿಂದ ಅವರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದಿರುವ ವಕೀಲರು, ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸೆಷನ್ಸ್ ಕೋರ್ಟ್ ಏನು ಹೇಳಲಿದೆ ಎಂಬುದನ್ನು ಕಾದು ನೋಡಬೇಕಿದೆ.