ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಆರಂಭ.. ಎಲ್ಲಿ? ಯಾವ ದಿನ?

rashtrapathi bhavan
Published on

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ(ಜೂನ್​4) ಹೊರಬೀಳಲಿರುವ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸ್ಥಳದಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆಗಳ ಬಗ್ಗೆ ಭದ್ರತಾ ಸಂಸ್ಥೆಗಳು ಗಮನ ಹರಿಸಿವೆ. ಇದೇ ವಾರಾಂತ್ಯದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಬಹುದು ಎನ್ನಲಾಗಿದೆ.

ಭದ್ರತಾ ಸಿದ್ಧತೆಗಳ ಕುರಿತು ದೆಹಲಿ ಪೊಲೀಸರು ಮತ್ತು ಕೇಂದ್ರ ಭದ್ರತಾ ಏಜೆನ್ಸಿಗಳು ಸಭೆ ನಡೆಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಂಗವಾಗಿ ಭದ್ರತಾ ಏಜೆನ್ಸಿಗಳು ಬಹು ಹಂತದ ಭದ್ರತೆ ಮತ್ತು ಸಂಚಾರ ನಿಯಂತ್ರಣವನ್ನು ಯೋಜಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸ್ಥಳದಲ್ಲಿ ಬದಲಾವಣೆಯಾದರೆ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುವುದು. ಜೂನ್ 9 ಅಥವಾ 10 ರಂದು ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಆಗಬಹುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಪ್ರಾಥಮಿಕ ಅಂದಾಜಿನ ಪ್ರಕಾರ, 12 ವಿದೇಶಿ ಗಣ್ಯರು ಸೇರಿದಂತೆ 10ಸಾವಿರ ಜನರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net