ಸೋಂಕಿತ ಮಹಿಳೆಯ ಸಂಪರ್ಕದಲ್ಲಿದ್ದವರ ವರದಿ ನೆಗೆಟಿವ್

14 KRN-2 (1)
?
Published on

ಕೆ.ಆರ್.ನಗರ: ಕರೊನಾ ಸೋಂಕು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಪಟ್ಟಣದ ಮುಸ್ಲಿಂ ಬಡಾವಣೆಯ ಗರ್ಭಿಣಿ ಜತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 22 ಜನರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಇದರಿಂದ ಪಟ್ಟಣದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಮೂರು ದಿನಗಳ ಹಿಂದೆ ಗರ್ಭಿಣಿಗೆ ಕೋವಿಡ್ ಸೋಂಕು ದೃಢಪಟ್ಟ ಸಂಗತಿ ಪಟ್ಟಣ ಸೇರಿದಂತೆ ತಾಲೂಕಿನ ಜನರು ಹಾಗೂ ಅಧಿಕಾರಿ ವರ್ಗದ ನೆಮ್ಮದಿಯನ್ನು ಕಸಿದುಕೊಂಡು ಆತಂಕಕ್ಕೆ ದೂಡಿತ್ತು. ಈ ನಡುವೆ, ಸೋಂಕು ಪೀಡಿತ ಮಹಿಳೆಯ ತಂದೆ-ತಾಯಿ, ಆಕೆಗೆ ಚಿಕಿತ್ಸೆ ನೀಡಿದ್ದ ವೈದ್ಯರು, ದಾದಿಯರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 15 ಪ್ರಾಥಮಿಕ ಸಂಪರ್ಕಿತರು ಮತ್ತು 17 ದ್ವಿತೀಯ ಸಂಪರ್ಕಿತರು ಸೇರಿ ಒಟ್ಟು 22 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ.

ಕೋವಿಡ್ ಸೋಂಕಿತ ಮಹಿಳೆಯ ಜತೆ ಸಂಪರ್ಕದಲ್ಲಿದ್ದ ಎಲ್ಲರ ವರದಿ ನೆಗೆಟಿವ್ ಬಂದಿದೆ ಮತ್ತು ಆಕೆ ವಾಸವಿದ್ದ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಆದ್ದರಿಂದ ಈ ಕುರಿತು ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ಮಾತ್ರ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್.ಮಹೇಂದ್ರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net