

ನವದೆಹಲಿ: ದೇಶಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಹುಲ್ ಗಾಂಧಿ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ರಾಷ್ಟ್ರದ ಜನತೆಗೆ ಶುಭಕೋರಿದ್ದಾರೆ.
ಟ್ವೀಟ್ ಮೂಲಕ ಶುಭ ಹಾರೈಸಿರುವ ಪ್ರಧಾನಿ ಮೋದಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಎಲ್ಲರಿಗೂ ಶುಭಕೋರಿದ್ದಾರೆ. ಈ ನಮ್ಮ ಗಣರಾಜ್ಯೋತ್ಸವದಂದು ಪ್ರತಿಯೊಬ್ಬ ಭಾರತೀಯನಿಗೂ ಶುಭಾಶಯಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಸಿಎಂ ಬಿಎಸ್ವೈ ನಾಡಿನ ಸಮಸ್ತ ಜನರಿಗೆ 71ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ. ಇಷ್ಟೇ ಅಲ್ಲದೆ ಇನ್ನು ಅನೇಕ ಗಣ್ಯರು ರಾಷ್ಟ್ರದ ಜನತೆಗೆ ಶುಭ ಸಂದರ್ಭದ ಶುಭಕೋರಿದ್ದಾರೆ. (ಏಜೆನ್ಸೀಸ್)