ಹೈಕೋರ್ಟ್ ಆದೇಶ ಜಾರಿಗೆ ಅಗ್ರಹ

HUN-JAN-11-1(DEED MEMEORENDUM)
Published on

ಹುಣಸೂರು: ಡಾ.ಮುಜಾಫರ್ ಅಸಾದಿ ವರದಿಯನ್ವಯ 3418 ಆದಿವಾಸಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಬೇಕೆನ್ನುವ ರಾಜ್ಯ ಉಚ್ಚ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡೀಡ್ ಸಂಸ್ಥೆ ನಿರ್ದೇಶಕ ಡಾ.ಎಸ್.ಶ್ರೀಕಾಂತ್ ತಿಳಿಸಿದ್ದಾರೆ.

ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು ಮತ್ತು ಡೀಡ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮೈಸೂರಿನಲ್ಲಿ ಸಂಸದರ ಕಚೇರಿಗೆ ತೆರಳಿ ಈ ಕುರಿತು ಮನವಿ ಸಲ್ಲಿಸಲಾಗಿದೆ. 10 ವರ್ಷಗಳ ಹಿಂದೆ ರಾಜ್ಯ ಹೈಕೋರ್ಟ್ ಆದಿವಾಸಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶಿಸಿದ್ದರೂ ಯಾವ ಸರ್ಕಾರಗಳು ಕೂಡ ಆದೇಶ ಪಾಲಿಸಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಆದಿವಾಸಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆದು ಹೈಕೋರ್ಟ್ ಆದೇಶ ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಸಂಸದರಲ್ಲಿ ಒತ್ತಾಯಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net