

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಅಂಗವಾಗಿ ಆಕಾಶವಾಣಿ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಮಾತೆ ಹೆಸರಲ್ಲಿ ಒಂದು ಮರ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ನಂತರ ಸ್ವಚ್ಛತಾ ಕಾರ್ಯ ನಡೆಸಿದರು.
ಕಾಗದನಗರದ ಶ್ರೀರಾಮ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಸಾರ್ವಜನಿಕರಿಂದ ನಮೋ ಆಪ್ ಡೌನ್‌ಲೋಡ್ ಮಾಡಿಸಿ ಸದಸ್ಯತ್ವ ಮಾಡಿಸಿದರು. ಶ್ರೀರಾಮನಗರ ಹಾಗೂ ಬಸಲೀಕಟ್ಟೆ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡು ನೂರಕ್ಕೂ ಅಧಿಕ ಸದಸ್ಯತ್ವ ಮಾಡಿಸಿರುವ ಸಕ್ರಿಯ ಕಾರ್ಯಕರ್ತರನ್ನು ಅಭಿನಂದಿಸಿದರು.
ಸದಸ್ಯತ್ವ ಹೆಚ್ಚಿಸಲು ಕಾರ್ಯಕರ್ತರು ಹೆಚ್ಚಿನ ಗಮನಹರಿಸುವಂತೆ ಮನವಿ ಮಾಡಿದರು. ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಮೋರ್ಚಾದಿಂದ ನಡೆಯುತ್ತಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಮೊಸರಳ್ಳಿ ಅಣ್ಣಪ್ಪ, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಮಂಗೋಟೆ ರುದ್ರೇಶ್, ಸಿಮೆಂಟ್ ಮಂಜಣ್ಣ, ರಾಮಲಿಂಗಯ್ಯ, ಧನುಷ್ ಇತರರಿದ್ದರು.