ನಿವೇಶನ, ಮನೆ ಒದಗಿಸುವಂತೆ ಮನವಿ

ramenakoppa
ರಾಮೇನಕೊಪ್ಪದ ವಸತಿ ರಹಿತರಿಗೆ ಮನೆ ಹಾಗೂ ನಿವೇಶನ ನೀಡುವಂತೆ ಆಗ್ರಹಿಸಿ ವಾಟಾಳ್ ಮಂಜುನಾಥ್ ಸೋಮವಾರ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಬಡವರಿಗೆ ನಿವೇಶನ ಮತ್ತು ಮನೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರಾಮೇನಕೊಪ್ಪ ಗ್ರಾಮಸ್ಥರು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಾಮೇನಕೊಪ್ಪದಲ್ಲಿ ಹಿಂದುಳಿದ ವರ್ಗಗಳ ಜನರು ಹಲವು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಇವರೆಲ್ಲ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದುವರೆಗೂ ಇವರಿಗೆ ಹಕ್ಕುಪತ್ರ ನೀಡಿಲ್ಲ. ಕೂಡಲೇ ಹಕ್ಕುಪತ್ರ ನೀಡಬೇಕು. ಹಲವು ಹಿಂದುಳಿದ ಬಡವರಿಗೆ ಮನೆಗಳೇ ಇಲ್ಲ. ಸೂರಿಲ್ಲದ ಎಲ್ಲರಿಗೂ ನಿವೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಗ್ರಾಮಸ್ಥರಾದ ಮಂಜಮ್ಮ, ಭಾಷಾ, ಕಾಂತಾಲಕ್ಷ್ಮೀ ಲೋಕೇಶ್, ಎಂ.ಮಂಜುಳಾ, ರವಿಕುಮಾರ್, ಶಿವರಾಜ್, ದಿನೇಶ್ ಮುಂತಾದವರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net