ಸಾಲಿಗಾಮ್ರದಲ್ಲಿ ಶಿರಸ್ತೇದಾರ್‌ಗೆ ಮನವಿ ಸಲ್ಲಿಕೆ

IMG_20230929_114049_758
Published on

ಸಾಲಿಗ್ರಾಮ: ಕರ್ನಾಟಕ ಬಂದ್ ಬೆಂಬಲಿಸಿ ಪಟ್ಟಣದಲ್ಲಿ ವರ್ತಕರು ಅಂಗಡಿಗಳನ್ನು ಮುಚ್ಚುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಪಟ್ಟಣದ ಬಸ್ ನಿಲ್ದಾಣ, ಗಾಂಧಿ ವೃತ್ತ, ಚುಂಚನಕಟ್ಟೆರಸ್ತೆ, ಮಹಾವೀರ ರಸ್ತೆ, ಆಟೋ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ರೈತ ಮಹಿಳಾ ಸಂಘ, ಆಟೋ ಚಾಲಕರ ಸಂಘ, ದಲಿತ ಸಂಘಟನೆಗಳು, ವರ್ತಕರ ಸಂಘ, ವಿಶ್ವ ಕನ್ನಡ ಸಮಿತಿ ಸಂಘ, ವಾಹನ ಚಾಲಕರ ಸಂಘ, ಟೈಲರ್ ಸಂಘ, ವಾಲ್ಮೀಕಿ ಸಂಘ ಸೇರಿದಂತೆ ಹಲವಾರು ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದವು.


ಅಂತಿಮವಾಗಿ ಪ್ರತಿಭಟನಾನಿರತರು ತಾಲೂಕು ಆಡಳಿತ ಕಚೇರಿ ಶಿರಸ್ತೇದಾರ್ ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಎಸ್.ಬಿ.ಶೇಖರ್, ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ತಿಮ್ಮಪ್ಪ, ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಲೀಲಾವತಿ, ಸಾಲಿಗ್ರಾಮ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾ, ಅಂಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರುಕ್ಮಿಣಿ, ವರ್ತಕರ ಸಂಘದ ಮಾಜಿ ಅಧ್ಯಕ್ಷ ಕುಪ್ಪಳ್ಳಿ ಸೋಮು, ಜಿಲ್ಲಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು, ಶುಭಾಷಿನಿ, ಎಸ್.ಕೆ.ಮಧುಚಂದ್ರ, ಪುರಿ ಗೋವಿಂದರಾಜು, ಸೀಗೋಳು ಸುಧಾಕರ್ ಇತರರಿದ್ದರು.


ಇದಕ್ಕೂ ಮುನ್ನ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಎಸ್.ಬಿ.ಶೇಖರ್, ಕಾವೇರಿ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗದಿದ್ದರೆ ನಿರಂತರವಾಗಿ ರಾಜ್ಯಾದ್ಯಂತ ರೈತ ಸಂಘದಿಂದ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net