ಉತ್ತರಾಖಂಡದಲ್ಲಿ ಕರ್ನಾಟಕದ ಚಾರಣಿಗರ ತಂಡದ ರಕ್ಷಣಾ ಕಾರ್ಯಾಚರಣೆ: ಸಚಿವ ಕೃಷ್ಣಬೈರೇಗೌಡ ಮಾಹಿತಿ

IMG_20240605_095027
Published on

ಬೆಂಗಳೂರು: ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ಮಂಗಳವಾರ ರಾತ್ರಿ ನಮಗೆ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ಈ ತಂಡದಲ್ಲಿದ್ದ ಕೆಲವರು ಪ್ರಸ್ತುತ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net