

ಸೊರಬ: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ಹೇಳಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಸೇರಿ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಏರ್ಪಡಿಸಿದಾಗ ಜಯಂತಿಗಳ ಆಚರಣೆಗೆ ಗೌರವ ಬರುತ್ತದೆ ಎಂದು ತಿಳಿಸಿದರು.
ಅ.17ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುನಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.
ವಾಲ್ಮೀಕಿ ಸಮಾಜದ ಅಧ್ಯಕ್ಷ ಗಣಪತಪ್ಪ, ಸಮಾಜ ಚಿಂತಕ ರಾಜಪ್ಪ ಮೇಷ್ಟ್ರು, ಇಒ ಪ್ರದೀಪಕುಮಾರ್, ಸಮಾಜ ಕಲ್ಯಾಣಾಧಿಕಾರಿ ಇಕ್ಬಾಲ್ ಜಾತಿಗೇರ್, ಕೃಷಿ ಅಧಿಕಾರಿ ಕೆ.ಜಿ.ಕುಮಾರ್, ಮುಖಂಡರಾದ ಬಸವರಾಜ್ ಹಸ್ವಿ, ಮಹೇಶ್ ಶಕುನವಳ್ಳಿ, ಸಂಜೀವ್, ಗುರುರಾಜ್, ಸೋಮಪ್ಪ, ದಯಾನಂದ ಕಲ್ಲೇರ್, ಶ್ಯಾಮಣ್ಣ, ಬಸವೇಶ್ವರ, ನಾಗಪ್ಪ ಇದ್ದರು.