ಸಕಾಲದಲ್ಲಿ ಸಾರ್ವಜನಿಕರಿಗೆ ಸ್ಪಂದಿಸಿ

29-RPT-2
ರಿಪ್ಪನ್‌ಪೇಟೆ ಗ್ರಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಡಾ. ಆಂಜನೇಯ ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷ ಧನಲಕ್ಷ್ಮೀ, ಸುಧೀಂದ್ರ ಪೂಜಾರಿ, ಮಧುಸೂದನ್ ಇತರರಿದ್ದರು.
Published on

ರಿಪ್ಪನ್‌ಪೇಟೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಇಲಾಖಾ ಅಧಿಕಾರಿಗಳು ಸಕಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾಪಂ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾವಾರು ಅಭಿವೃದ್ಧಿಗಳ ಮಾಹಿತಿ ಪಡೆದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹರಿಸುವ ಕೆಲಸ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ವೈದ್ಯ ಆಂಜನೇಯ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿ ದಿನ 250ಕ್ಕೂ ಅಧಿಕ ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದು, ಅಗತ್ಯ ಔಷಧೋಪಚಾರ ಮಾಡಲಾಗುತ್ತಿದೆ. ರಕ್ತ ಪರೀಕ್ಷೆಯಿಂದ 110 ಡೆಂೆ ಪ್ರಕರಣ ಪತ್ತೆಯಾಗಿದ್ದು, ಚಿಕಿತ್ಸೆ ಪಡೆದ ಎಲ್ಲರೂ ಆರೋಗ್ಯವಾಗಿದ್ದಾರೆ. ಲಾರ್ವಾ ನಿಯಂತ್ರಣಕ್ಕಾಗಿ ಮೂರು ಬಾರಿ ಫಾಗಿಂಗ್ ಮಾಡಲಾಗಿದೆ. ಇತ್ತೀಚೆಗೆ ಡೆಂೆ ಪ್ರಕರಣ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದರು.
ಪಶು, ಕೃಷಿ ಮತ್ತು ತೋಟಗಾರಿಕಾ ಇಲಾಖೆೆಗಳಿಂದ ರೈತರಿಗಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಲಾಯಿತು. ಸಾಗರ ಮತ್ತು ಶಿವಮೊಗ್ಗ ಮುಖ್ಯರಸ್ತೆ ಪಕ್ಕದಲ್ಲಿ ಬೀಳುವ ಸ್ಥಿತಿಯಲ್ಲಿರುವ ಮರಗಳ ರೆಂಬೆ, ಕೊಂಬೆಗಳನ್ನು ಕತ್ತರಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬ್ಯಾಂಕ್‌ಗಳಲ್ಲಿ ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಸಭೆಗೆ ಗೈರಾಗಿರುವ ಬ್ಯಾಂಕ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡುವಂತೆ ಸೂಚಿಸಲಾಯಿತು. ಕೆಡಿಪಿ ಸದಸ್ಯರಾದ ಆಸೀಫ್, ಚಂದ್ರೇಶ್, ಉಪತಹಸೀಲ್ದಾರ್ ಹುಚ್ರಾಯಪ್ಪ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪಿಡಿಒ ಮಧುಸೂದನ, ಪಶುವೈದ್ಯ ದಯಾನಂದ, ಮೆಸ್ಕಾಂನ ಕೃಷ್ಣ, ತೋಟಗಾರಿಕೆ ಇಲಾಖೆಯ ಚಂದ್ರಶೇಖರ, ಪ್ರಾಚಾರ್ಯ ವಿರೂಪಾಕ್ಷಪ್ಪ, ಪ್ರಾಧ್ಯಾಪಕ ದೇವರಾಜ್, ಎಎಸ್‌ಐ ಮಂಜಪ್ಪ, ಡಿಆರ್‌ಎಫ್‌ಒ ಮಹೇಶ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net