ತಾಲಿಬಾನ್ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿರ್ಬಂಧ: ವಿಪಕ್ಷಗಳು ಕೆಂಡ, ಸರ್ಕಾರದ ಯಾವುದೇ ಪಾತ್ರ ವಹಿಸಿಲ್ಲ ಎಂದ MEA

female journalists
Published on

MEA: ನಿನ್ನೆ ನಡೆದ ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ನಿರ್ಬಂಧಿಸಲಾಗಿದೆ ಎಂಬ ಆರೋಪವು ರಾಜಕೀಯ ಮತ್ತು ಲಿಂಗ ಹಕ್ಕುಗಳ ವಿವಾದಕ್ಕೆ ನಾಂದಿ ಹಾಡಿದೆ.

ಈ ಬಗ್ಗೆ ವಿಪಕ್ಷಗಳು ಕೆಂಡಕಾರಿದ್ದು, ಮಾಜಿ ಗೃಹ ಸಚಿವ ಪಿ ಚಿದಂಬರಂ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದ ಅಮೀರ್ ಖಾನ್ ಮುತ್ತಕಿ ಮಾತನಾಡಿದ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡಲಾಗಿದೆ ಎಂದು ತಿಳಿದು ನನಗೆ ಆಘಾತವಾಗಿದೆ. ಅಲ್ಲದೆ, ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ತಮ್ಮ ಮಹಿಳಾ ಸಹೋದ್ಯೋಗಿಗಳನ್ನು ಹೊರಗಿಡಲಾಗಿದೆ ಎಂದು ಪುರುಷ ಪತ್ರಕರ್ತರಿಗೆ ತಿಳಿದಾಗ ಅವರು ಹೊರನಡೆಯಬೇಕಿತ್ತು ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿವಾದದ ಬಗ್ಗೆ ತೀವ್ರ ಟೀಕೆ ಮಾಡಿರುವ TMC ಸಂಸದೆ ಮಹುವಾ ಮೊಯಿತ್ರಾ, ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಮುತ್ತಕಿ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟು ಪೂರ್ಣ ಶಿಷ್ಟಾಚಾರದೊಂದಿಗೆ ಭಾರತೀಯ ನೆಲದಲ್ಲಿ ಪುರುಷರಿಗೆ ಮಾತ್ರ ಸುದ್ದಿಗೋಷ್ಠಿ ನಡೆಸಲು ನಮ್ಮ ಸರ್ಕಾರಕ್ಕೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಇಎಎಂ ಜೈಶಂಕರ್ ಇದಕ್ಕೆ ಒಪ್ಪಲು ಎಷ್ಟು ಧೈರ್ಯ? ಮತ್ತು ನಮ್ಮ ಬಡಕಲು ಬೆನ್ನುಮೂಳೆಯಿಲ್ಲದ ಪುರುಷ ಪತ್ರಕರ್ತರು ಕೋಣೆಯಲ್ಲಿ ಏಕೆ ಇದ್ದರು? ಎಂದು ಮೊಯಿತ್ರಾ ಕಿಡಿಕಾರಿದ್ದಾರೆ.

ವಿವಾದಕ್ಕೆ ಪ್ರತಿಕ್ರಿಯಿಸಿದ MEA

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯವು ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ಯಾವುದೇ ಪಾತ್ರ ವಹಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

MEA issued a statement on Saturday.

ನಿನ್ನೆ ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯ ಯಾವುದೇ ಪಾತ್ರ ವಹಿಸಿಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ತಿಳಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net