ಕರೊನಾ ಅಬ್ಬರ: ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತರಾದ ವೈದ್ಯರಿಗೆ ರಿಕಾಲ್!

army medical staff
Published on

ನವದೆಹಲಿ: ದೇಶದಲ್ಲಿ ಉಂಟಾಗಿರುವ ಕೋವಿಡ್19 ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಭಾರತೀಯ ಸೇನೆಯ ಸಿದ್ದತೆ ಏನು? ಹಾಗೂ ಈ ಸಂದರ್ಭದಲ್ಲಿ ಸೇನೆಯಿಂದ ಮಾಡಬೇಕಾದ ಕೆಲಸವೇನು ಎಂಬುದರ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಚೀಫ್ ಆಫ್ ಡಿಪೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರೊಂದಿಗೆ ಸಭೆ ನಡೆಸಿದರು.

ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಪಿನ್ ರಾವತ್ ಅವರು ಕೋವಿಡ್ ಬಗ್ಗೆ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಮುಖ್ಯವಾಗಿ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿ ಎರಡು ವರ್ಷ ಪೂರೈಸಿದ ವೈದ್ಯರನ್ನು ಕೋವಿಡ್ ನಿಯಂತ್ರಣ ಕೆಲಸಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಬಿಪಿನ್ ರಾವತ್ ತಿಳಿಸಿದ್ದಾರೆ. ಇವರೊಂದಿಗೆ ಈಗ ಸೇನೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರನ್ನು ಕೋವಿಡ್ ತಡೆ ಕೆಲಸದಲ್ಲಿ ಬಳಸಿಕೊಳ್ಳಲಾಗುವುದು. ಸೇನೆಯಲ್ಲಿ ಕೋವಿಡ್ ತಡೆ ನಿಯಮಾವಳಿಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ ಎಂದು ರಾವತ್ ತಿಳಿಸಿದ್ದಾರೆ.

ನಾಗರಿಕರಿಗೆ ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಸೌಲಭ್ಯಗಳು ನಾಗರಿಕರಿಗೆ ದೊರಕುವಂತೆ ಸೇನಾ ಆಸ್ಪತ್ರೆಗಳಲ್ಲಿ ನೋಡಿಕೊಳ್ಳಲಾಗುತ್ತಿದೆ ಎಂದು ರಾವತ್ ಪ್ರಧಾನಿ ಅವರಿಗೆ ತಿಳಿಸಿದ್ದಾರೆ. ಅಲ್ಲದೇ ವಾಯುಸೇನೆಯಿಂದ ವಿದೇಶಗಳಿಂದ ಆಕ್ಸಿಜನ್ ತರುವಲ್ಲಿ ಶ್ರಮದ ಕುರಿತು ಮೋದಿ ಅವರು ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net