ನಿವೃತ್ತ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಎಸ್ಪಿ ಭರವಸೆ

17 smg 17
Published on

ಶಿವಮೊಗ್ಗ: ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಏನೇ ಸಮಸ್ಯೆಗಳಿದ್ದರೂ ಗಮನಕ್ಕೆ ತಂದರೆ ತಕ್ಷಣವೇ ಸ್ಪಂದಿಸಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಭರವಸೆ ನೀಡಿದರು.

ನಗರದ ಡಿಎಆರ್ ಸಭಾಂಗಣದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತ ಅಧಿಕಾರಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದರು.

ಸರ್ಜಿ ಆಸ್ಪತ್ರೆಯ ಸ್ಮಾರ್ಟ್ ಹೆಲ್ತ್‌ಕಾರ್ಡ್ ವಿತರಿಸಿ ಮಾತನಾಡಿದ ಸರ್ಜಿ ಫೌಂಡೇಶನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ್ ಸರ್ಜಿ, ವೈದ್ಯಕೀಯ ಮತ್ತು ರಕ್ಷಣಾ ಕ್ಷೇತ್ರ ಎರಡು ಒಂದೇ ನಾಣ್ಯದ ಎರಡು ಮುಖಗಳಿಂತೆ. ತುರ್ತು ಸಂದರ್ಭದಲ್ಲಿ ನಮ್ಮ ಸೇವೆ ತುಂಬಾ ಅವಶ್ಯಕವಾಗಿರುತ್ತದೆ. ಹಬ್ಬವಿರಲಿ ಅಥವಾ ಬೇರೆ ಏನೇ ಕಾರ್ಯ ಇದ್ದರೂ ಅದನ್ನೆಲ್ಲ ಬದಿಗಿಟ್ಟು ಕೆಲಸಕ್ಕೆ ತಮ್ಮ ಸಮಯ ನೀಡಬೇಕಾಗುತ್ತದೆ ಎಂದರು.

ಆರೋಗ್ಯದಲ್ಲಿ ಏನು ತೊಂದರೆ ಇದ್ದರೂ ವೈದ್ಯರ ಸಲಹೆ ಪಡೆಯಬೇಕು. ವರ್ಷಕ್ಕೆ ಒಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಘದ ಅಧ್ಯಕ್ಷ ಜೆ.ಪಿ.ಚಿಕ್ಕೇಗೌಡ, ಕಾರ್ಯದರ್ಶಿ ಎಸ್.ಜಿ.ನಾಯಕ್, ನಮಿತಾ ಧನಂಜಯ್ ಹಾಗೂ 500ಕ್ಕೂ ಅಧಿಕ ಸಂಘದ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net