

ಭೋಪಾಲ್: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಗೆ ನೀಡಲಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಹಿಂಪಡೆಯುವಂತೆ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, 2007ರಲ್ಲಿ ಕೇಂದ್ರ ಸರ್ಕಾರ ಸೆಟಲ್ವಾಡ್ ಗೆ ಪದ್ಮಶ್ರೀ ನೀಡಿ ಗೌರವಿಸಿತು. ಇದು ವಿವಿಧ ಕ್ಷೇತ್ರಗಳಲ್ಲಿ ಜನರ ಕೊಡುಗೆಯನ್ನು ಗುರುತಿ ನೀಡುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು, ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗಾಗಿ ಸೆಟಲ್ವಾಡ್ ಅವರಿಗೆ ಪ್ರಶಸ್ತಿ ನೀಡಿದೆ ಎಂದು ಆರೋಪಿಸಿದ್ದಾರೆ.
ತೀಸ್ತಾ ಪ್ರಶಸ್ತಿ ವಾಪ್ಸಿ ಗ್ಯಾಂಗ್‌ನ ಸದಸ್ಯರಾಗಿದ್ದಾರೆ(ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಬೆದರಿಕೆ ಹಾಕುವವರು) ಹಾಗಾಗಿ ತೀಸ್ತಾ ಜಾವೇದ್ ಸೆಟಲ್ವಾಡ್ ಅವರಿಂದ ಪ್ರಶಸ್ತಿ ಹಿಂಪಡೆಯಬೇಕು, ಅಲ್ಲದೇ ಸುಪ್ರೀಂಕೋರ್ಟ್ ಟೀಕೆ ಮಾಡಿರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ. (ಏಜೆನ್ಸೀಸ್)