ಮತದಾರರ ಪಟ್ಟಿ ಪರಿಷ್ಕರಣೆಗೆ ಪರಿಷ್ಕೃತ ವೇಳಾಪಟ್ಟಿ

Manoj Kumar Meena
Published on

ಬೆಂಗಳೂರು: ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳಾಪಟ್ಟಿ ಪರಿಷ್ಕರಿಸಿದೆ. ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು ಜ,1 2024 ರವರೆಗೆ ಅವಧಿ ನಿಗದಿಪಡಿಸಿದೆ. ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಪಡೆಯುವುದು ಹಾಗೂ ಡೇಟಾಬೇಸ್‌ನ್ನು ನವೀಕರಿಸುವುದು, ಪೂರಕಗಳ ಮುದ್ರಣ ಅವಧಿ ಜ.17 2024 ನಿಗದಿಪಡಿಸಲಾಗಿದೆ. ಜ.22,2024 ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ.

ಅರ್ಹತಾ ದಿನಾಂಕ ಜ.1, 2024ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 27.12.2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net