

ಬೆಂಗಳೂರು: ವೈಟ್‌ಫೀಲ್ಡ್ ಸಮೀಪದ ನಲ್ಲೂರಹಳ್ಳಿಯಲ್ಲಿ ಬೈಕ್ ಸವಾರ ನೀರಿನ ಟ್ಯಾಂಕರ್ ಹಿಂದಿಕ್ಕುವ ಯತ್ನದಲ್ಲಿ ಅಪಘಾತ ಸಂಭವಿಸಿದ್ದು, ಮಧು ಎಂಬ ಯುವಕ ಮೃತಪಟ್ಟಿದ್ದಾನೆ.
ನಲ್ಲೂರಹಳ್ಳಿ ನಿವಾಸಿಯಾದ ಮಧು, ುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಆತ ಆ.೨೯ ುಡ್ ಡೆಲಿವರಿ ಮಾಡಲು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ನಿರ್ಲಕ್ಷ್ಯದಿಂದ ಅತಿ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ಮಧು, ನೀರಿನ ಟ್ಯಾಂಕರ್ ಅನ್ನು ಎಡ ಭಾಗದಿಂದ ಹಿಂದಿಕ್ಕಲು ಯತ್ನಿಸಿದ್ದಾನೆ. ಈ ವೇಳೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಆತನ ಬೈಕ್ ತಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಗೆ ಬಿದ್ದ ಮಧು ಮೇಲೆ ನೀರಿನ ಟ್ಯಾಂಕರ್ ಚಕ್ರ ಹರಿದಿದೆ. ತೀವ್ರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಆತ ಮೃತಪಟ್ಟ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದ ದೃಶ್ಯಾವಳಿ ಘಟನಾ ಸ್ಥಳದ ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರಂಭದಲ್ಲಿ ನೀರಿನ ಟ್ಯಾಂಕರ್ ಚಾಲಕನ ಅಜಾಕರೂಕತೆಯೇ ಅಪಘಾತಕ್ಕೆ ಕಾರಣ ಎಂದು ನಿರ್ಧರಿಸಲಾಗಿತ್ತು. ಆದರೆ, ಸಿ.ಸಿ. ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದಾಗ ಮಧುನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈಟ್‌ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.