'ರಿಹಾನ್ನಾ 100 ಕೋಟಿ ರೂಪಾಯಿ ದಂಡ ಕಟ್ಟಬೇಕು!' ವಿದೇಶಿ ಗಾಯಕಿಯನ್ನು ತರಾಟೆಗೆ ತೆಗೆದುಕೊಂಡ ಬಾಲಿವುಡ್​ ನಟಿ

kangana
Published on

ಮುಂಬೈ: ದೇಶದ ರೈತ ಹೋರಾಟದಲ್ಲಿ ವಿದೇಶಿ ಸೆಲೆಬ್ರಿಟಿಗಳು ಮತ್ತು ಹೋರಾಟಗಾರರು ಮೂಗು ತೂರಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಭಾರತೀಯ ಕೃಷಿಕರ ಬಗ್ಗೆ ಮಾತನಾಡಿದ ವಿದೇಶಿ ಗಾಯಕಿ ರಿಹಾನ್ನಾ ಭಾರತಕ್ಕೆ ಕನಿಷ್ಠ 100 ಕೋಟಿ ರೂಪಾಯಿ ದಂಡ ತೆರಬೇಕು ಎಂದು ಬಾಲಿವುಡ್​ನ ನಟಿಯೊಬ್ಬರು ಆಗ್ರಹಿಸಿದ್ದಾರೆ.

ನಟಿ ಕಂಗನಾ ರಣಾವತ್​, ವಿದೇಶಿ ಗಣ್ಯರು ಭಾರತೀಯ ವಿಚಾರದಲ್ಲಿ ಮೂಗು ತೂರಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೆಹಾನ್ನಾ 4300 ಕೋಟಿ ರೂಪಾಯಿ ಮೌಲ್ಯ ಹೊಂದಿದ್ದಾರೆ. ನಮ್ಮ ದೇಶದ ರೈತರ ಬಗ್ಗೆ ಟ್ವೀಟ್ ಮಾಡಿರುವ ಅವರು ಕನಿಷ್ಠ 100 ಕೋಟಿ ರೂಪಾಯಿ ದಂಡ ಕಟ್ಟಬೇಕು ಎಂದು ಕಂಗನಾ ಹೇಳಿದ್ದಾರೆ. ಖಾಸಗಿ ವಾಹಿನಿಯೊಂದರ ಜತೆ ಮಾತನಾಡುವಾಗ ಅವರು ಈ ಮಾತನ್ನು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಗಾಯಕಿ ರೆಹಾನ್ನಾ ಹತೆ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಕೂಡ ಬೆಂಬಲ ನೀಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net