ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ; ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಫ್ಯಾನ್ಸ್!

Rishab Shetty
Published on

ಉಡುಪಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ.

ಮತದಾನ ಮಾಡಿದ ರಕ್ಷಿತ್ ಶೆಟ್ಟಿ

ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಬಾಲ್ಯದಲ್ಲಿ ಉಡುಪಿ ನಗರ ಬೆಳೆಯಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net