ಹಿಂದಿ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ: ರಿಷಬ್​ ಶೆಟ್ಟಿ

Rishab-Shetty-6
Published on

ಬೆಂಗಳೂರು: ಕಾಂತಾರ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಟ, ನಿರ್ದೇಶಕ ರಿಷಬ್​ ಶೆಟ್ಟಿಗೆ ಶುಭಾಶಯಗಲ ಮಹಾಪೂರವೇ ಹರಿದು ಬರುತ್ತಿದ್ದು, ಅವರ ಈ ಸಾಧನೆ ಅನೇಕರಿಗೆ ಮಾದರಿಯಾಗಿದೆ. ತಮ್ಮ ನಿರ್ದೇಶನದ ಮೂಲಕ ಒಳ್ಳೆಯ ಸಿನಿಮಾಗಳನ್ನು ನೀಡಿರುವ ರಿಷಬ್​ ಇದೀಗ ಬಾಲಿವುಡ್​ನ ಕುರಿತು ನೀಡಿರುವ ಹೇಳಿಕೆ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

ರಿಷಬ್​ ಶೆಟ್ಟಿ ನಿರ್ಮಿಸಿ ಪ್ರಮೋದ್​ ಶೆಟ್ಟಿ ನಾಯಕನಾಗಿ ನಟಿಸಿರುವ ಲಾಫಿಂಗ್​​​ ಬುದ್ದ ಚಿತ್ರದ ಪ್ರಚಾರದ ವೇಳೆ ರಿಷಬ್​ ಬಾಲಿವುಡ್​ನ ಸಿನಿಮಾಗಳ ಕುರಿತು ಮಾತನಾಡಿದ್ದಾರೆ. ಬಾಲಿವುಡ್​ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದು ನಟ ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ರಿಷಬ್​, ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್​ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್​ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್​ನಲ್ಲಿ ತೋರಿಸಬಹುದಲ್ಲ ಎಂದು ನಟ ರಿಷಬ್​ ಶೆಟ್ಟಿ ಹೇಳಿದ್ದಾರೆ.

ಇತ್ತ ರಿಷಬ್​ ಶೆಟ್ಟಿ ಹೇಳಿಕೆಯ ವಿಡಿಯೋ ಕೆಲವೇ ಕ್ಷಣಗಳಲ್ಲಿ ವೈರಲ್​ ಆಗಿದ್ದು, ಹಲವರು ರಿಷಬ್​ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಅವರು ಸರಿಯಾದ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕಮೆಂಟ್​ಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಭಾರತದ ಸಿನಿಮಾ ಇಂಡಸ್ಟ್ರಿಯಲ್ಲಿ ಬಾಲಿವುಡ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು, ಬೇರೆ ಭಾಷೆಯ ಸಿನಿಮಾಗಳಿಗೂ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುವಂತೆ ಮಾಡಿದೆ ಎಂದು ನೆಟ್ಟಿಗರೊಬ್ಬರು ಕಮೆಂಟ್​​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net