

ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಗೆ ಅವರಿಗೆ ಕೋಟ್ಯಂತರ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಸುತ್ತಿದ್ದಾರೆ. ಆದ್ರೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಇದನ್ನು ರೀ-ಟ್ವೀಟ್ ಮಾಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜೂನ್(9)ರಂದು ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ್ದು, ಸದ್ಯ ರಿಷಭ್ ಶೆಟ್ಟಿ, ‘3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮೂರನೇ ಬಾರಿಗೆ ಭಾರತದ ಪ್ರಧಾನಿ ಆಗುತ್ತಿರುವ ನಿಮಗೆ ಅಭಿನಂದನೆ. ಅಭಿವೃದ್ಧಿ, ಶಿಕ್ಷಣ ಮತ್ತು ರಾಷ್ಟ್ರೀಯ ಸುರಕ್ಷತೆಯ ಕಡೆಗೆ ನಿಮ್ಮ ಸಮರ್ಪಣೆಯನ್ನು ಗೌರವಿಸುತ್ತೇವೆ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೋದಿ ಅವರನ್ನು ಹೊಗಳಿದ್ದಾರೆ.
ಕಳೆದ ವರ್ಷ 2023ರ ಏರ್ ಇಂಡಿಯಾ ಶೋಗೆ ಆಗಮಿಸಿದ್ದ ಮೋದಿ ಅವರು ನಟ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು ,ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಡಿಜಿಟಲ್ ಕ್ರಿಯೇಟರ್ ಶ್ರದ್ಧಾ ಜೈನ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತಾಡಿದ್ರು. ಮಹಾನಾಯಕ ಮೋದಿ ಅವರನ್ನು ಭೇಟಿಯಾಗಿದ್ದು ನನ್ನ ಅದೃಷ್ಟ ಎಂದು ಹಿಂದೆ ರಿಷಬ್ ಶೆಟ್ಟಿ ಹೇಳಿದ್ರು.