Road Accident| ಕ್ಯಾಂಟರ್​ಗೆ ಕಾರು ಡಿಕ್ಕಿ; ಐವರು ಸಾವು, ಇಬ್ಬರು ಗಂಭೀರ

Road Accident
Published on

ಜೈಪುರ: ಕ್ಯಾಂಟರ್​ ಮತ್ತು ಟಾಟಾ ಸಫಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಚುರು-ಹನುಮಾನ್‌ಗಢ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕ್ಯಾಂಟರ್​ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬಿಕಾನೇರ್​ಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿ ಅರವಿಂದ್​ ಕುಮಾರ್​, ಚುರು ಜಿಲ್ಲೆಯ ಸರ್ದಾರ್‌ಶಹರ್‌ನಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರು ಹನುಮಾನ್​ಗಢಕ್ಕೆ ತೆರಳುತ್ತಿದ್ದರು. ಬುಕಾನ್‌ಸರ್ ಫಾಂಟಾ ಬಳಿ ಕ್ಯಾಂಟರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. 

ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದು, ಕ್ಯಾಂಟರ್​ ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಿಕಾನೇರ್​ಗೆ ಸ್ಥಳಾಂತರಿಸಲಾಗಿದ್ದು, ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಅರವಿಂದ್​ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net