

ಬಾರ್ಮೆರ್: ಬಸ್ ಮತ್ತು ಬೊಲೆರೋ ಕ್ಯಾಂಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮೆರ್ ಜಿಲ್ಲೆಯಲ್ಲಿ ನಡೆದಿದೆ.
ಬಾರ್ಮೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ದುರ್ಘಟನೆ ಸಂಭವಿಸಿದ್ದು, ಕ್ಯಾಂಪರ್ ವಾಹನದಲ್ಲಿ ಸುಮಾರು 18 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಜೋಧ್ಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.