

ಹೈದರಾಬಾದ್ : ( road accident ) ಅತಿ ವೇಗದಲ್ಲಿ ಬರುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಹೈದರಾಬಾದ್ ನಗರ ವ್ಯಾಪ್ತಿಯ ಹಯಾತ್‌ನಗರ ಕಂಟ್ಲೂರಿನಲ್ಲಿ ಈ ಮಾರಕ ರಸ್ತೆ ಅಪಘಾತ ಸಂಭವಿಸಿದೆ.
ಮೃತರನ್ನು ಚಂದ್ರಸೇನ ರೆಡ್ಡಿ, ತ್ರಿನಾದ್ ರೆಡ್ಡಿ ಮತ್ತು ವರ್ಷಿತ್ ರೆಡ್ಡಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಒಂದೇ ಗ್ರಾಮದವರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ವಿವರಗಳನ್ನು ಸಂಗ್ರಹಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಹಯಾತ್‌ನಗರದ ಕುಂಟ್ಲೂರಿನಲ್ಲಿ ನಡೆದ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಗಳು ಆಘಾತಕಾರಿಯಾಗಿವೆ. ಕಾರು ಅತಿ ವೇಗದಲ್ಲಿ ಬರುತ್ತಿದ್ದು, ಲಾರಿಗೆ ಡಿಕ್ಕಿ ಹೊಡೆದಿದೆ ಮೃತದೇಹಗಳು ಕಾರಿನೊಳಗೆ ಸಿಲುಕಿಕೊಂಡಿವೆ. ಕಾರಿನಿಂದ ಶವಗಳನ್ನು ಹೊರತೆಗೆಯಲು ಸ್ಥಳೀಯರಿಗೆ ಬಹಳ ಕಷ್ಟವಾಯಿತು.
ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.