

Road Accident: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ಸಮೀಪದ ಕಾಶಿಗೆ ತೆರಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ 5 ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಸುನೀತಾ (35), ಸಂತೋಷ್ (43), ನೀಲಮ್ಮ (60), ಗಣೇಶ ಹಾಗೂ ಶಿವು ಗುರುತಿಸಲಾಗಿದೆ.
ಬೀದರ್ನಿಂದ ಪ್ರಯಾಗ್ರಾಜ್ಗೆ ಕ್ರೂಸರ್ನಲ್ಲಿ 14 ಜನ ತೆರಳಿದ್ದರು. ಕುಂಭಮೇಳವನ್ನು ಮುಗಿಸಿಕೊಂಡು ಕಾಶಿ ಕಡೆಗೆ ತೆರಳುತ್ತಿದ್ದ ವೇಳೆ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.
ಮೃತರು ಬೀದರ್ನ ಲಾಡಗೇರಿ ಬಡಾವಣೆಯ ನಿವಾಸಿಗಳು. ಅಪಘಾತದಲ್ಲಿ ಏಳು ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ.
ಇಂದು (ಫೆ. 21) ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ0. ಕ್ರೂಸರ್ ಡಿಕ್ಕಿ ಹೊಡೆದ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ.