ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊನೆಗೂ ಚಾಲನೆ

30 SARAG 4
ಸರಗೂರು ಪಟ್ಟಣದ ಒಂದನೇ ಮುಖ್ಯ ರಸ್ತೆಯಲ್ಲಿ ಡಾಂಬರೀಕರಣ ಕೆಲಸ ಭರದಿಂದ ಸಾಗಿರುವುದು.
Published on

ಸರಗೂರು: ಪಟ್ಟಣದ ಮೊದಲನೇ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ವತಿಯಿಂದ ಕೊನೆಗೂ ಇತ್ತೀಚೆಗೆ ಚಾಲನೆ ನೀಡಲಾಯಿತು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಟ್ಟಣದ ಮಹಾವೀರ ಸರ್ಕಲ್ ಬಳಿಯಿಂದ ಸಂತೆಮಾಸ್ತಮ್ಮ ದೇವಸ್ಥಾನವರೆಗೆ ಅರ್ಥಂಬರ್ಥ ಕಾಮಗಾರಿ ಮಾಡಿ ಕೈ ಬಿಡಲಾಗಿತ್ತು. ಈ ಸಂಬಂಧ ನ.14 ರಂದು ವಿಜಯವಾಣಿಯಲ್ಲಿ ‘ಒಂದನೇ ಮುಖ್ಯ ರಸ್ತೆ ದುರಸ್ತಿ ಯಾವಾಗ?’ ಎಂದು ವರದಿ ಮಾಡಲಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮತ್ತೊಂದೆಡೆ ಕಾಮಗಾರಿಗೆ ಚಾಲನೆ ದೊರೆತಿರುವುದಕ್ಕೆ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಮುಖ್ಯಾಧಿಕಾರಿ ಎಸ್.ಎಸ್.ಮಂಜುನಾಥ್ ಮಾತನಾಡಿ, ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ಅನೇಕ ಬಾರಿ ಸೂಚಿಸಿದ್ದೆ. ಆದರೂ ಆಗಿರಲಿಲ್ಲ. ಇದೀಗ ವಿಜಯವಾಣಿಯಲ್ಲಿ ವರದಿ ಪ್ರಕಟಗೊಂಡಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಶಾಸಕರು ಭೂಮಿಪೂಜೆ ನೆರವೇರಿಸಿದ್ದರು.ಪಟ್ಟಣದ ಅಭಿವೃದ್ಧಿಗೆ ನಗರೋತ್ಥಾನ ಅನುದಾನ ಬಳಕೆ ಮಾಡಿಕೊಳ್ಳುವ ಸಂಬಂಧ ವಿಜಯವಾಣಿಯಲ್ಲಿ ಪ್ರಕಟಣೆ ಹೊರಡಿಸಲಾಗಿತ್ತು. ಕೊನೆಗೂ ಅಧಿಕಾರಿಗಳು ಮತ್ತು ಸರ್ಕಾರ ಎಚ್ಚೆತು ಕಾಮಾರಿ ಆರಂಭಿಸಿರುವುದು ಸಂತಸ ವಿಚಾರ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net