ಹುಲ್ಲೇಬೋರೇಕಾವಲು ರಸ್ತೆ ಅಭಿವೃದ್ಧಿಗೆ ಆಗ್ರಹ

3
Published on

ಗಂಧನಹಳ್ಳಿ: ಕೆ.ಆರ್. ನಗರ ತಾಲೂಕು ಗಂಧನಹಳ್ಳಿಯಿಂದ ಹುಲ್ಲೇಬೋರೇಕಾವಲಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿರುವ ಕಾರಣ ವಾಹನ ಸಂಚಾರ ಕಷ್ಟವಾಗಿದೆ.3 ಕಿ.ಮೀ. ಉದ್ದದ ಈ ರಸ್ತೆಯಲ್ಲಿ ಕಲ್ಲುಗಳು ಮೇಲೆದ್ದಿವೆ. ಈ ಮಾರ್ಗದಲ್ಲಿ ಗ್ರಾಮದ ನೂರಾರು ಕೃಷಿಕರ ಗದ್ದೆ, ಹೊಲಗಳಿವೆ. ಕೃಷಿಕರು ಜಮೀನುಗಳಿಗೆ ತೆರಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಮಾರ್ಗದಲ್ಲಿ 1983ರಿಂದ ಈಚೆಗೆ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಹಲವು ಬಾರಿ ವಾಹನಗಳು ಬಿದ್ದು, ಸವಾರರಿಗೆ ಅಪಘಾತವಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಗ್ರಾಮದ ಜನರು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.
ಆಗ್ರಹ : ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿಪಡಿಸುವತ್ತ ಶಾಸಕ ರವಿಶಂಕರ್ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಜಿ.ಎಚ್. ನಾಗರಾಜ್ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net