ಭೂ ಸ್ವಾಧೀನ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಿ; ಅಧಿಕಾರಿಗಳಿಗೆ ಬಿ.ವೈ. ರಾಘವೇಂದ್ರ ಸೂಚನೆ

16-RNR-05
Published on

ರಾಣೆಬೆನ್ನೂರ: ರಾಣೆಬೆನ್ನೂರ-ಶಿವಮೊಗ್ಗ ರೈಲ್ವೆ ಹಳಿ ನಿರ್ಮಾಣಕ್ಕಾಗಿ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ರೈತರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಕಂದಾಯ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೈಂದೂರು-ರಾಣೆಬೆನ್ನೂರ ಹೆದ್ದಾರಿ- 766ಅ ಹಾಗೂ ಶಿವಮೊಗ್ಗ ಶಿಕಾರಿಪುರ ರಾಣೆಬೆನ್ನೂರ ರೈಲ್ವೆ ಮಾರ್ಗದ ಕಾಮಗಾರಿ ಆದಷ್ಟು ಬೇಗ ಆರಂಭಿಸಬೇಕಿದೆ.
ಆದ್ದರಿಂದ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದಲ್ಲದೆ ಬಾಕಿ ಇರುವ ಹೆದ್ದಾರಿ ಕೆಲಸವನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು ಎಂದು ಸೂಚಿಸಿದರು. ಭೂ ಸ್ವಾಧೀನ ಪಡಿಸಿಕೊಂಡ ಜಮೀನುಗಳ ರೈತರಿಗೆ ಆದಷ್ಟು ಬೇಗ ಪರಿಹಾರ ಅವರ ಖಾತೆಗೆ ಜಮಾ ಆಗುವಂತೆ ನೋಡಿಕೊಳ್ಳಬೇಕು ಎಂದರು.
ರಾಷ್ಟ್ರೀಯ ಹೆದ್ದಾರಿಯ ಸಿಇ ರಮೇಂದ್ರ, ಎಸ್‌ಇ ರಾಜೇಶ, ಹಾವೇರಿ ಎಸಿ ಚನ್ನಪ್ಪ, ರೈಲ್ವೆ ಅಧಿಕಾರಿ ಬಸವರಾಜ ಹಾಗೂ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net