

Robbery: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜ್ಯುವೆಲ್ಲರಿ ಶಾಪ್ವೊಂದರಲ್ಲಿ ಮೂವರು ವ್ಯಕ್ತಿಗಳು ನುಗ್ಗಿ ಸಿನಿಮೀಯ ರೀತಿಯಲ್ಲಿ ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಜು. 24ರಂದು ನಡೆದಿದೆ.
ಮಾಗಡಿ ರಸ್ತೆಯ ಭೈರವೇಶ್ವರ ಕಾಂಪ್ಲೆಕ್ಸ್ನಲ್ಲಿರುವ ರಾಮ್ ಜ್ಯುವೆಲ್ಲರ್ಸ್ನಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದರೋಡೆ ನಡೆದಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಂಗಡಿ ಮುಚ್ಚುವ ಸಮಯಕ್ಕೆ ಕೈಯಲ್ಲಿ ಗನ್ ಹಿಡಿದು ನುಗ್ಗಿದ ಮಾಸ್ಕ್ ಧರಿಸಿದ ಮೂವರು ದುಷ್ಕರ್ಮಿಗಳು, ಮಾಲೀಕ ಕನ್ಹಯ್ಯ ಲಾಲ್ ಮತ್ತು ಸಹಾಯಕನನ್ನ ಹೆದರಿಸಿ, ಎದುರಿಗೆ ಸಿಕ್ಕ 186 ಗ್ರಾಂ ಚಿನ್ನಾಭರಣವನ್ನ ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ಪೊಲೀಸರು ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.