

Controversial: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಉದ್ಯಮಿ ರಾಬರ್ಟ್ ವಾದ್ರಾ ಬುಧವಾರ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಈ ಘಟನೆಯನ್ನು ಭಾರತದಲ್ಲಿ ಹಿಂದುಗಳು ಮತ್ತು ಮುಸ್ಲಿಮರ ನಡುವೆ ಹೆಚ್ಚುತ್ತಿರುವ ವಿಭಜನೆಯ ಕಾರಣದಿಂದ ಈ ಕೃತ್ಯಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಅಲ್ಪಸಂಖ್ಯಾತರು ಅನಾನುಕೂಲ ಹಾಗೂ ತೊಂದರೆ ಅನುಭವಿಸುತ್ತಿದ್ದರೆ, ಕೇಂದ್ರದ ಬಿಜೆಪಿ ಸರ್ಕಾರ ಹಿಂದೂತ್ವವನ್ನು ಬೆಳೆಸುವಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ವಾದ್ರಾ, ನಮ್ಮ ದೇಶದಲ್ಲಿ ಈ ಸರ್ಕಾರ ಹಿಂದುತ್ವದ ಬಗ್ಗೆ ಮಾತನಾಡುವುದನ್ನು ನಾವು ನೋಡುತ್ತೇವೆ. ಅಲ್ಪಸಂಖ್ಯಾತರು ಅನಾನುಕೂಲ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ. ಒಂದು ವೇಳೆ ಉಗ್ರರು ಜನರನ್ನು ಗುರುತಿಸಿದರೆ, ಈ ರೀತಿ ಯಾಕೆ ಮಾಡ್ತಾರೆ? ನಮ್ಮ ದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಒಡಕು ಉಂಟಾಗಿದೆ. ಹಾಗಾಗಿ ಈ ರೀತಿಯ ಕೃತ್ಯ ಮಾಡುತ್ತಾರೆ ಎಂದು ಹೇಳಿದರು.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ, ಕಿಡಿ ಕಾಡಿದ್ದಾರೆ. ಉಗ್ರರ ಕೃತ್ಯ ಕುರಿತು ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಸಮರ್ಥನೆ ನಾಚಿಕೆಗೇಡಿನತನದು. ಖಂಡಿಸುವ ಬದಲು ಉಗ್ರರನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪಾಕ್ ಉಗ್ರರು ಮಾಡಿರುವ ದೌರ್ಜನ್ಯಗಳಿಗೆ ಭಾರತವನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.