ರೋಹಿತ್ ವೆಮುಲಾ ಕಾಯ್ದೆ; ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ | Rohith Vemula Act

dk - 2025-04-21T154056.634
Published on

ಬೆಂಗಳೂರು: ರೋಹಿತ್ ವೆಮುಲಾ ಕಾಯ್ದೆಯ(Rohith Vemula Act) ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ನಗರದಲ್ಲಿ ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.

4 ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಈ ಮುಂಚೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net