

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣದ ವೇಳೆ ಯುವಕ&ಯುವತಿ ಒಬ್ಬರಿಗೊಬ್ಬರು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ವಿಡಿಯೋ ಜಾಳತಾಣದಲ್ಲಿ ವೈರಲ್ ಆಗಿದೆ.
ಭಾನುವಾರ ಪ್ರಯಾಣದ ವೇಳೆ ರೈಲು ಬಾಗಿಲಿನ ಬಳಿ ನಿಂತುಕೊಂಡಿದ್ದ ಯುವಕ& ಯುವತಿ ತಬ್ಬಿಕೊಳ್ಳುತ್ತಿರುವ ದೃಶ್ಯವನ್ನು ಸಹ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಟನೆ ವಿರುದ್ಧ ಮೆಟ್ರೋ ಬಳಕೆದಾರರಿಂದ ಆಕ್ರೋಶ ವ್ಯಕ್ತವಾಗಿದೆ. ನಿತ್ಯ ಲಾಂತರ ಮಂದಿ ಪ್ರಯಾಣಿಸುವ ಮೆಟ್ರೋ ರೈಲಿನಲ್ಲಿ ಇದೆಂತಹ ಅಸಭ್ಯ ವರ್ತನೆ ಎಂದು ಕೆಲವರು ಕಿಡಿಕಾರಿದ್ದಾರೆ.
ಸ್ಯಾಮ್ ಎಂಬುವವರು "ಎಕ್ಸ್' ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಬಿಎಂಆರ್ಸಿಎಲ್ ಹಾಗೂ ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. "ಯುವಕ&ಯುವತಿ ಮೆಟ್ರೋ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿರುವ ಟನೆ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು "ವಿಜಯವಾಣಿ'ಗೆ ಬಿಎಂಆರ್ಸಿಎಲ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ದೆಹಲಿ ಮೆಟ್ರೋ ರೈಲಿನಲ್ಲಿ ಕೆಲ ಜನರು ಬೇಜವಾಬ್ದಾರಿ ಹಾಗೂ ಅಶ್ಲೀಲವಾಗಿ ವರ್ತಿಸುತ್ತಿರುವ ಬಗ್ಗೆ ನಿತ್ಯ ವರದಿಯಾಗುತ್ತಲೇ ಇದೆ. ಇಂತಹ ಟನೆಗಳಿಂದ ಹಿರಿಯ ನಾಗರಿಕರು, ಮಹಿಳಾ ಪ್ರಯಾಣಿಕರು ಮುಜುಗರಕ್ಕೆ ಒಳಗಾಗುತ್ತಾರೆ. ಇಂತಹ ಪ್ರಕರಣಗಳು ನಮ್ಮ ಮೆಟ್ರೋದಲ್ಲೂ ನಡೆಯಬಾರದು. ಹೀಗಾಗಿ ಜನರು ತಮ್ಮ ಸಾಮಾಜಿಕ ಜವಾಬ್ದಾರಿ ಅರಿತು ಪ್ರಯಾಣಿಸಬೇಕು ಎಂದು ಸಾರ್ವಜನಿಕರು ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.