

ರಾಣೆಬೆನ್ನೂರ: ಸ್ಥಳೀಯ ರೋಟರಿ ಕ್ಲಬ್ ಹಾಗೂ ಇನ್ನರ್ ವ್ಹೀಲ್ ಕ್ಲಬ್‌ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 13ರಂದು ಬೆಳಗ್ಗೆ 10.40ಕ್ಕೆ ನಗರದ ಸ್ಟೇಷನ್ ರಸ್ತೆಯ ವರ್ತಕರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ರೋಟರಿ ಕ್ಲಬ್ ಸಹಾಯಕ ರಾಜ್ಯಪಾಲ ಮಂಜುನಾಥ ಉಪ್ಪಾರ ಅತಿಥಿಗಳಾಗಿ ಆಗಮಿಸುವರು. ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ರಾಜಣ್ಣ ಮೋಟಗಿ, ಕಾರ್ಯದರ್ಶಿ ಪ್ರಕಾಶ ಮಾಳಗಿ ಹಾಗೂ ಇನ್ನರ್‌ವ್ಹೀಲ್ ಕ್ಲಬ್‌ನ ನೂತನ ಅಧ್ಯಕ್ಷೆ ಸಂಜನಾ ಕುರವತ್ತಿ, ಕಾರ್ಯದರ್ಶಿ ಪ್ರಮೀಳಾ ಜಂಬಗಿ ಮತ್ತು ಇತರ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸುವರು. ಕ್ಲಬ್‌ನ ಜಿಲ್ಲೆಯ ಮಾಜಿ ರಾಜ್ಯಪಾಲ ಪ್ರಾಣೇಶ ಜಹಗೀರದಾರ ಪ್ರಮಾಣವಚನ ಬೋಧಿಸುವರು ಎಂದು ಪ್ರಕಟಣೆ ತಿಳಿಸಿದೆ.