ಖಾಸಗಿ ಶಾಲೆಗಳಿಂದ ಸರ್ಕಾರಿ ಸ್ಕೂಲ್ ಅವನತಿ

bhr rotary
ಕಾನೂರು ಕಟ್ಟಿನಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್‌ನಿಂದ ವಿವಿಧ ಕ್ರೀಡಾ ಸಾಮಗ್ರಿಗಳನ್ನು ನೀಡಲಾಯಿತು. ಎ.ಆರ್.ಸುರೇಂದ್ರ, ಶ್ರೀಧರ್ ಆಚಾರ್ಯ, ಭಾರತಿ ಇದ್ದರು.
Published on

ಬಾಳೆಹೊನ್ನೂರು: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ಅವನತಿ ಹೊಂದುತ್ತಿವೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ ಹೇಳಿದರು. ಹರಾವರಿ ಕಾನೂರು ಕಟ್ಟಿನಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್‌ನಿಂದ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸಿ ಮಾತನಾಡಿ, ಬಾಳೆಹೊನ್ನೂರು ರೋಟರಿ ಸಂಸ್ಥೆ ವಿವಿಧೆಡೆ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ವಿವಿಧ ಶಾಲಾ ಪರಿಕರಗಳು, ಕ್ರೀಡಾ ಸಾಮಗ್ರಿಗಳು, ಕುಡಿಯುವ ನೀರಿನ ವ್ಯವಸ್ಥೆ, ಸಮವಸ, ಬ್ಯಾಂಡ್‌ಸೆಟ್ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡುತ್ತಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಶ್ರೀಧರ್ ಆಚಾರ್ಯ ಮಾತನಾಡಿ, ರೋಟರಿ ಕ್ಲಬ್‌ನಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಾಗಿ ಪರಿಕರಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯಶಿಕ್ಷಕಿ ಭಾರತಿ, ರೋಟರಿ ಕಾರ್ಯದರ್ಶಿ ಯಶವಂತ, ಸಹಶಿಕ್ಷಕ ಲೋಕೇಶ, ಭರತ್, ಪದ್ಮರೇಖಾ, ಅಂಗನವಾಡಿ ಮೇಲ್ವಿಚಾರಕಿ ಬಿ.ಆರ್.ಭಾರತಿ, ಲವೀನಾ ಪಾಯ್ಸ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net