ರೋಟರಿಯಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ

18ss1computer koduge
ಆಲೂರುಸಿದ್ದಾಪುರ ಮಲ್ಲೇಶ್ವರ ರೋಟರಿ ಕ್ಲಬ್ ವತಿಯಿಂದ ತೊರೆನೂರು ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಲಾಯಿತು.ವಿಕ್ರಂದತ್ತ, ದಯಾನಂದ್, ಹರಿಶೆಟ್ಟಿ, ಕಿರಣ್, ಭಾಗ್ಯಲಕ್ಷ್ಮೀ ಮುಂತಾದವರು ಇದ್ದರು.
Published on

ಶನಿವಾರಸಂತೆ: ಮಲ್ಲೇಶ್ವರ ರೋಟರಿ ಕ್ಲಬ್ ವತಿಯಿಂದ ಸಮೀಪದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಉದ್ದೇಶದಿಂದ ಕಂಪ್ಯೂಟರ್ ಮತ್ತು ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ರಾಜ್ಯಪಾಲ ವಿಕ್ರಂದತ್ತ ಮಾತನಾಡಿ, ರೋಟರಿ ಕ್ಲಬ್ ವಿಶ್ವದ ಸಮಾಜ ಸೇವಾ ಸಂಸ್ಥೆಗಳಲ್ಲಿ ಒಂದಾಗಿದು,್ದ ಈ ಮೂಲಕ ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯವನ್ನು ಮಾಡುತ್ತಿದೆ. ರೋಟರಿ ಸಂಸ್ಥೆ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಅರಣ್ಯ ಮತ್ತು ಪರಿಸರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧ್ದಿಗಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

ಮಲ್ಲೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಟಿ.ವಿ.ದಯಾನಂದ್ ಮಾತನಾಡಿ, ಆಲೂರುಸಿದ್ದಾಪುರ ರೋಟರಿ ಕ್ಲಬ್ ಈ ಭಾಗದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಕೊಡುಗೆ ನೀಡುತ್ತಿರುವ ಜತೆಗೆ ಹಲವಾರು ಸಮಾಜಮುಖಿ ಕಾರ್ಯವನ್ನು ಮಾಡುತ್ತಿದ್ದು, ಈ ದಿಸೆಯಲ್ಲಿ ಸಾರ್ವಜನಿಕರು ರೋಟರಿ ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ರೋಟರಿ ಕ್ಲಬ್ ಕಾರ್ಯದರ್ಶಿ ಎಚ್.ಕೆ.ಕಿರಣ್, ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲ ಹರಿ ಎ.ಶೆಟ್ಟಿ, ರೋಟರಿ ವಲಯ ಸೇನಾನಿ ಉದಯ್‌ಕುಮಾರ್ ಮತ್ತು ರೋಟರಿ ಕ್ಲಬ್ ಸದಸ್ಯರು ಶಾಲಾ ಮುಖ್ಯ ಶಿಕ್ಷಕಿ ಭಾಗ್ಯಲಕ್ಷ್ಮೀ, ಸಹ ಶಿಕ್ಷಕ ಕೆ.ಆರ್.ಅನಿಲ್ ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್‌ಕುಮಾರ್, ಸದಸ್ಯ ರವಿಕುಮಾರ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net