

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ಹಿನ್ನೆಲೆಯಲ್ಲಿ ರೌಡಿಶೀಟರ್ ಹೊಸಗುಡ್ಡದಹಳ್ಳಿ ನಿವಾಸಿ ಮನೋಜ್.ಆರ್ ಅಲಿಯಾಸ್ ಕೆಂಚ(೨೬)ನನ್ನು ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ರೌಡಿ ಶೀಟರ್ ಮನೋಜ್ ಕಳೆದ ಎಂಟು ವರ್ಷಗಳಿಂದ ಅಪರಾಧಗಳಲ್ಲಿ ತೊಡಗಿದ್ದಾನೆ. ಈತನ ವಿರುದ್ಧ ಈ ಹಿಂದೆ ಕೊಲೆ, ಕೊಲೆಗೆ ಯತ್ನ, ಹಲ್ಲೆ, ಅಪಹರಣ, ಸುಲಿಗೆ ಸೇರಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ೧೨ ಅಪರಾಧ ಪ್ರಕರಣಗಳು ದಾಖಲಾಗಿವೆ. ಈತ ಪದೇ ಪದೇ ಸಮಾಜಘಾತುಕ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಿಸಿಬಿ ಅಧಿಕಾರಿಗಳು ನಗರ ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ನಗರ ಪೊಲೀಸ್ ಆಯುಕ್ತರ ಸಮ್ಮತಿಸಿರುವ ಹಿನ್ನೆಲೆಯಲ್ಲಿ ರೌಡಿ ಮನೋಜ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.