42 ಕೇಸ್‌ಗೆ ಬೇಕಿದ್ದ ರೌಡಿ ಸೆರೆ

crime
Published on

ಬೆಂಗಳೂರು: ಕೊಲೆ, ಸುಲಿಗೆ, ಕೊಲೆ ಯತ್ನ, ಕಳ್ಳತನ ಸೇರಿ 42 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಬಾಣಸವಾಡಿ ಠಾಣೆ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್. ಪುರ ನಿವಾಸಿ ಅಜೀಜ್ ಆಸ್ೀ (32) ಬಂಧಿತ. 2015ರಿಂದ ನಗರದ ವಿವಿಧ ಠಾಣೆಗಳಲ್ಲಿ 36, ತುಮಕೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ 7 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 2 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಗೋವಾದಲ್ಲೂ ಆರೋಪಿ ವಿರುದ್ಧ ಎ್ಐಆರ್ ದಾಖಲಾಗಿತ್ತು. ಸಕಾಲಕ್ಕೆ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್, ಜಾಮೀನುರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು. ಭಾರತಿನಗರದ ಆರ್ಮ್ ಸ್ಟ್ರಾಂಗ್ ರಸ್ತೆಯಲ್ಲಿ ಇರುವುದರ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 12 ಮೊಬೈಲ್, 4 ಚಿನ್ನದ ಕಾಸಿನ ತಾಳಿ, 1 ಮಾಂಗಲ್ಯ ಸರ, 2 ಚಿನ್ನದ ಗುಂಡು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net