

ಬೆಂಗಳೂರು: ವಿವಿಧ ಅಪಾರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಎಂ.ಸಿ.ಶ್ರೀಕಾಂತ್(೨೭) ಅಲಿಯಾಸ್ ಮ್ಯಾಡಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಈತನ ಅಪರಾಧಿಕ ಕೃತ್ಯಗಳನ್ನು ತಡೆಯುವ ಸಲುವಾಗಿ ಗೂಂಡಾ ಕಾಯ್ದೆಯಡಿ ಬಂಧಿಸಲು ಕಾಡುಗೋಡಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅವರು, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಅಂಗೀಕರಿಸಿದ ಆಯುಕ್ತರು ಗೂಂಡಾ ಕಾಯ್ದೆಯಡಿ ರೌಡಿ ಶ್ರೀಕಾಂತ್ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಶ್ರೀಕಾಂತ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಶ್ರೀಕಾಂತ್ ವಿರುದ್ಧ ಹಲ್ಲೆ, ಕೊಲೆಯತ್ನ ಸೇರಿ ೭ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.